ಬಿಗ್ ಬಾಸ್ ಗೂ ನಮಗೂ ಯಾವುದೇ ಸಂಬಂಧವಿಲ್ಲ: ನಿಯಮ ಉಲ್ಲಂಘಿಸಿದ್ದಕ್ಕೆ ಜಾಲಿವುಡ್ ಸ್ಟುಡಿಯೋ ಸೀಲ್ ; KSPCB
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ಬಿಗ್ ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ. ನಾವು ನೋಟಸ್ ನೀಡಿರುವುದು ಜಾಲಿವುಡ್ ಸ್ಟುಡಿಯೋಸ್ ಗೆ ಮಾತ್ರ. ಹಾಗಾಗಿ, ನಮ್ಮ ಟಾರ್ಗೆಟ್ ಬಿಗ್ ಬಾಸ್ ಅಲ್ಲ. ಇದರಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ವರದಿಯ ಆಧಾರದ ಮೇಲೆ ಮತ್ತು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ನಡೆಯುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದ ಬಗ್ಗೆ ನಮಗೆ ಏನೂ ತಿಳಿದಿಲ್ಲ, ಅದನ್ನೂ ಮುಚ್ಚುವ ಆದೇಶಕ್ಕೂ ಯಾವುದೇ ಸಂಬಂಧವಿಲ್ಲ. ಜಾಲಿವುಡ್ ಸ್ಟುಡಿಯೋದ 30 ಎಕರೆ ಆವರಣವನ್ನು ಸೀಲ್ ಮಾಡುವ ಆದೇಶವಿತ್ತು ಎಂದು ತಿಳಿಸಿದರು.