ಅ.23ರಿಂದ ‘ಎಸ್‌ವಿಆರ್50’ ಅದ್ದೂರಿ ಸಮಾರಂಭ
ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳು ಆಗಿವೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಿಂದ ‘ಎಸ್‌ವಿಆರ್ 50’ ಎಂಬ ಅದ್ದೂರಿ ಸಮಾರಂಭ ಆಯೋಜಿಸಲು ತೀರ್ಮಾನಿಸಲಾಗಿದೆ.
‘ರಾಜೇಂದ್ರಸಿಂಗ್ ಬಾಬು ಅವರು ನಿರ್ದೇಶನವನ್ನಷ್ಟೇ ಅಲ್ಲದೆ ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ‘ಬೆಳ್ಳಿ ಹೆಜ್ಜೆ’ಯಂಥ ಕಾರ್ಯಕ್ರಮ ಮಾಡಿದ್ದರು. ಅವರು ತಮ್ಮ ಚಿತ್ರಗಳ ಮೂಲಕವೇ ಮನೆ ಮಾತಾಗಿದ್ದಾರೆ’ ಎಂದರು ನಿರ್ದೇಶಕ ಗಿರೀಶ್ ಕಾಸರವಳ್ಳಿ.