IND vs WI 2nd Test: ಫಾಲೋ ಆನ್ ಭೀತಿಯಲ್ಲಿ ವಿಂಡೀಸ್; ಊಟದ ವಿರಾಮಕ್ಕೆ 217/8
ದೆಹಲಿ: ಆತಿಥೇಯ ಭಾರತ ವಿರುದ್ಧ ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದ ಊಟದ ವಿರಾಮದ ಹೊತ್ತಿಗೆ ವೆಸ್ಟ್ ಇಂಡೀಸ್ 72 ಓವರ್‌ಗಳಲ್ಲಿ 217 ರನ್ನಿಗೆ ಎಂಟು ವಿಕೆಟ್ ಕಳೆದುಕೊಂಡಿದ್ದು, ಸಂಕಷ್ಟದಲ್ಲಿದೆ.
301 ರನ್ ಹಿನ್ನಡೆಯಲ್ಲಿರುವ ವಿಂಡೀಸ್ ಫಾಲೋ ಆನ್ ಭೀತಿಯಲ್ಲಿದೆ. ಆ ಮೂಲಕ ಪಂದ್ಯದಲ್ಲಿ ಶುಭಮನ್ ಗಿಲ್ ಬಳಗ ಸಂಪೂರ್ಣ ಹಿಡಿತವನ್ನು ಸಾಧಿಸಿದೆ. ಎರಡನೇ ದಿನದ ಅಂತ್ಯಕ್ಕೆ ವಿಂಡೀಸ್ 140ಕ್ಕೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಇಂದು ಕೂಡ ಭಾರತೀಯ ಬೌಲರ್‌ಗಳ ನಿಖರ ದಾಳಿಯನ್ನು ಎದುರಿಸಲು ಸಾಧ್ಯವಾಗಲಿಲ್ಲ.