ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್ ಜಯಭೇರಿ!
ಆಲ್‌ರೌಂಡರ್ ಅಲಿರೇಜಾ ಮಿರ್ಜಾಯಿನ್ ಅವರ ಅಮೋಘ ಆಟದ ನೆರವಿನಿಂದ ಬೆಂಗಳೂರು ಬುಲ್ಸ್ ತಂಡವು ಪ್ರೊ ಕಬಡ್ಡಿ ಲೀಗ್‌ನಲ್ಲಿ ಬೆಂಗಾಲ್ ವಾರಿಯರ್ಸ್ ವಿರುದ್ಧ 43-32 ಅಂಕಗಳಿಂದ ಗೆಲುವು ಸಾಧಿಸಿತು. ಈ ಮೂಲಕ ಹ್ಯಾಟ್ರಿಕ್ ಜಯ ದಾಖಲಿಸಿದ ಬುಲ್ಸ್, ಅಂಕಪಟ್ಟಿಯಲ್ಲಿ ಅಗ್ರ 5ರಲ್ಲಿ ಉಳಿದುಕೊಂಡಿದೆ.