ಪಾಕಿಸ್ತಾನ್ ವಿರುದ್ಧ 11 ವಿಕೆಟ್ ಕಬಳಿಸಿದ ಮುತ್ತುಸಾಮಿ
Pakistan vs South Africa Test: ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 378 ರನ್ ಬಾರಿಸಿದ್ದ ಪಾಕಿಸ್ತಾನ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 167 ರನ್ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ ತಂಡವು 277 ರನ್ಗಳ ಗುರಿ ಪಡೆದುಕೊಂಡಿದೆ.
ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಸ್ಪಿನ್ನರ್ ಸೆನುರಾನ್ ಮುತ್ತುಸಾಮಿ 11 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್ನಲ್ಲಿ 378 ರನ್ಗಳಿಸಿ ಆಲೌಟ್ ಆಗಿತ್ತು.