2 ಭರ್ಜರಿ ಸಿಕ್ಸ್, 14 ಫೋರ್: ಮೊದಲ ದಿನವೇ ಶತಕ ಸಿಡಿಸಿದ ಇಶಾನ್ ಕಿಶನ್
Ranji Trophy 2025: 91ನೇ ರಣಜಿ ಟ್ರೋಫಿ ಟೂರ್ನಿ ಶುರುವಾಗಿದೆ. ಈ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಕಣಕ್ಕಿಳಿಯುತ್ತಿವೆ. ಇಲ್ಲಿ 32 ಟೀಮ್ಗಳು ಎಲೈಟ್ ಗ್ರೂಪ್ನಲ್ಲಿ ಕಣಕ್ಕಿಳಿದರೆ, 6 ತಂಡಗಳು ಪ್ಲೇಟ್ ಗ್ರೂಪ್ನಲ್ಲಿ ಮೊದಲ ಸುತ್ತಿನ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ದ್ವಿತೀಯ ಸುತ್ತಿನ ಪಂದ್ಯಗಳು ನಡೆಯಲಿದೆ.
ರಣಜಿ ಟೂರ್ನಿಯ (Ranji Trophy 2025) ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಕೊಯಬಂತ್ತೂರಿನ ಶ್ರೀ ರಾಮಕೃಷ್ಣ ಕಾಲೇಜ್ ಆಫ್ ಆರ್ಟ್ಸ್ ಅಂಡ್ ಸೈನ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ತಮಿಳುನಾಡು ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.