ರಾಯಚೂರು: RSS ಪಥಸಂಚಲನದಲ್ಲಿ ಭಾಗಿ, PDO ಅಮಾನತು!
ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಗೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧದ ಸರ್ಕಾರದ ಕ್ರಮದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಗಣವೇಷಧಾರಿಯಾಗಿ 'ಆರ್ ಎಸ್ ಎಸ್' ಪಥ ಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.