World Cup: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕ್
ಕೊಲಂಬೊ: ಮಹಿಳಾ ವಿಶ್ವಕಪ್‌ನ 22ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಪಾಕಿಸ್ತಾನ ತಂಡವು ವಿಶ್ವಕಪ್‌ನಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಸೋತಿದ್ದು, ಎರಡು ಪಂದ್ಯಗಳು ರದ್ದಾಗಿವೆ. ಒಟ್ಟು 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ. ಸೆಮಿಫೈನಲ್ ಕನಸು ಜೀವಂತವಾಗಿರಬೇಕಾದರೆ, ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.