Aus vs Ind: ಮತ್ತೆ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ; ಭಾರತಕ್ಕೆ ಆರಂಭಿಕ ಆಘಾತ
ಅಡಿಲೇಡ್: ಭಾರತ ತಂಡದ ನಾಯಕ ಶುಭಮನ್ ಗಿಲ್ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲೂ ವೈಫಲ್ಯ ಅನುಭವಿಸಿದ್ದಾರೆ.
ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ತಂಡದ ನಾಯಕ ಮಿಚೇಲ್ ಮಾರ್ಷ್, ಬೌಲಿಂಗ್ ಆಯ್ದುಕೊಂಡರು. ಅದರಂತೆ ಕ್ರೀಸ್‌ಗಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತಕ್ಕೆ ಒಳಗಾಗಿದೆ.