ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Case) ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ (State Women Commission) ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತು ತನಿಖೆ ನಡೆಸುವಂತೆ ಅಥವಾ ತನಿಖೆ ನಡೆಸಿದ್ದರೆ ಮಾಹಿತಿ ಹಂಚಿಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದೆ.