ಭಾರತ- ಆಫ್ರಿಕಾ ಟೆಸ್ಟ್ ಸರಣಿ ಗೆದ್ದ ತಂಡಕ್ಕೆ WTC ಪಾಯಿಂಟ್ ಪಟ್ಟಿಯಲ್ಲಾಗುವ ಲಾಭವೇನು
ಭಾರತ ವಿರುದ್ಧ ದಕ್ಷಿಣ ಆಫ್ರಿಕಾ (India vs South Africa) ಟೆಸ್ಟ್ ಸರಣಿ ನವೆಂಬರ್ 14 ರಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಡಬ್ಲ್ಯುಟಿಸಿಯನ್ನು ( WTC Points Table) ಗಮನದಲ್ಲಿಟ್ಟುಕೊಂಡು ಈ ಸರಣಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡಕ್ಕೂ ಬಹಳ ಮುಖ್ಯವಾಗಲಿದೆ. ಈ ಸರಣಿಯನ್ನು ಜಯಿಸುವ ತಂಡಕ್ಕೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನ ಸಿಗಲಿದೆ. ಭಾರತ ತನ್ನ ಕೊನೆಯ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2-0 ಅಂತರದಿಂದ ವೈಟ್‌ವಾಶ್ ಮಾಡಿತ್ತು. ಇತ್ತ ಹಾಲಿ ಚಾಂಪಿಯನ್ ದಕ್ಷಿಣ ಆಫ್ರಿಕಾ, ಪಾಕಿಸ್ತಾನ ವಿರುದ್ಧದ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿ ಇದೀಗ ಭಾರತಕ್ಕೆ ಬಂದಿಳಿದೆ.