ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನ.11 ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಏಕೆ ಗೊತ್ತೇ
ಬೆಂಗಳೂರು: ನವೆಂಬರ್ 11 ರಂದು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 'ರಾಷ್ಟ್ರೀಯ ಶಿಕ್ಷಣ ದಿನಾಚರಣೆ'ಯನ್ನು ಆಚರಿಸುವಂತೆ ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ. ಇಲಾಖೆಯ ಸೂಚನೆಯಂತೆ, ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರ ಸಂಕಿರಣಗಳು, ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆಯ