ಗ್ರೇಟರ್ ಬೆಂಗಳೂರು ಪ್ರಾಧಿಕಾರ: ವಾರ್ಡ್‌ಗಳ ಮರು ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ, ಸಂಖ್ಯೆ 369ಕ್ಕೇರಿಕೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ನೂತವಾಗಿ ರಚಿಸಲಾದ ಐದು ನಗರ ಪಾಲಿಕೆಗಳ ವಾರ್ಡ್‌ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದ ನಂತರ ಸೆ.2ರಂದು ಜಿಬಿಎ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ವಿಂಗಡಣಾ ಆಯೋಗ ರಚನೆ ಮಾಡಲಾಗಿತ್ತು.