Koppal: ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಣಿಯಾದ ಅಂಜನಾದ್ರಿ; ಸಿದ್ಧತೆ ಹೇಗಿದೆ
ಕೊಪ್ಪಳ, ಡಿಸೆಂಬರ್ 02: ನಾಳೆ ನಡೆಯಲಿರುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹನುಮದ್ ವ್ರತ ಆಚರಣೆ ಮಾಡಿದ ಹನುಮನ ಭಕ್ತರು ಅಂಜನಾದ್ರಿ ಬೆಟ್ಟದ 575 ಮೆಟ್ಟಿಲೇರಿ ಮಾಲೆಯನ್ನ ವಿಸರ್ಜನೆ ಮಾಡಲಿದ್ದಾರೆ. ಈ ಹಿನ್ನಲೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.