ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!
ಅಬು ಧಾಬಿ: ಆಸ್ಟ್ರೇಲಿಯಾದ ತಾರಾ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಈ ಬಾರಿ ಐಪಿಎಲ್ ಮಿನಿ ಹರಾಜಿನಲ್ಲಿ ನಿರೀಕ್ಷೆಯಂತೆಯೇ ಬಂಪರ್ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಅವರನ್ನು ಮಾಜಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಬರೋಬ್ಬರಿ ₹25.20 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ. ಜೊತೆಗೆ ಶ್ರೀಲಂಕಾದ ವೇಗಿ ಮಥೀಶ ಪತಿರನ ಕೂಡಾ ಜಾಕ್‌ಪಾಟ್ ಹೊಡೆದಿದ್ದು, ಬರೋಬ್ಬರಿ ₹18 ಕೋಟಿಗೆ ಕೋಲ್ಕತಾ ಪಾಲಾಗಿದ್ದಾರೆ.