ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ
ಬೆಂಗಳೂರು: ರಾಜ್ಯದಲ್ಲಿ ವಜ್ರ, ಚಿನ್ನ, ತಾಮ್ರ, ಬಾಕ್ಸೈಟ್ ಸೇರಿದಂತೆ ಇನ್ನು ಅನೇಕ ಬೆಲೆಬಾಳುವ ಲೋಹ ನಿಕ್ಷೇಪಗಳನ್ನು ಪತ್ತೆ ಹಚ್ಚಲು ಹೊಸದಾಗಿ ಗಣಿಗಾರಿಕೆ ಸ್ಥಳ ಪ್ರಾಥಮಿಕ ಶೋಧಕ್ಕೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 6.71ಲಕ್ಷ ಹೆಕ್ಟೇರ್ ಪ್ರದೇಶವನ್ನು ಗುರುತಿಸಲಾಗಿದೆ.