ಒಂದೇ ಓವರ್‌ನಲ್ಲಿ 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಇಂಡೋನೇಷ್ಯಾದ ಗೆಡೆ ಪ್ರಿಯಾಂಡನಾ; ಟಿ20ಐ ಇತಿಹಾಸದಲ್ಲಿಯೇ ಮೊದಲು!
ಮಂಗಳವಾರ ಬಾಲಿಯಲ್ಲಿ ಇತಿಹಾಸ ನಿರ್ಮಾಣವಾಗಿದ್ದು, ಇಂಡೋನೇಷ್ಯಾದ 28 ವರ್ಷದ ಬಲಗೈ ವೇಗಿ ಗೆಡೆ ಪ್ರಿಯಂಡಾನಾ, ಟಿ20ಐ ಇತಿಹಾಸದಲ್ಲಿಯೇ ಒಂದೇ ಓವರ್‌ನಲ್ಲಿ ಐದು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿಯಂಡಾನಾ ಅವರು ಪುರುಷ ಮತ್ತು ಮಹಿಳಾ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೊದಲನೆಯವರು. ಲಸಿತ್ ಮಲಿಂಗ, ರಶೀದ್ ಖಾನ್ ಮತ್ತು ಜೇಸನ್ ಹೋಲ್ಡರ್ ಅವರಂತಹ ಆಟಗಾರರು ಒಂದೇ ಓವರ್‌ನಲ್ಲಿ 4 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಇದಕ್ಕೂ ಮೊದಲು ಯಾರೂ ಒಂದೇ ಓವರ್‌ನಲ್ಲಿ 5 ವಿಕೆಟ್‌ಗಳನ್ನು ಪಡೆದಿರಲಿಲ್ಲ.