ಉಕ್ರೇನ್ ಸಮರ ಕೊನೆಗೊಳಿಸಲು ಟ್ರಂಪ್–ಝೆಲೆನ್‌ಸ್ಕಿ ಸಭೆ: ಮುಖ್ಯಾಂಶಗಳು ಇಂತಿವೆ
ಫ್ಲಾರಿಡಾ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಮಾತುಕತೆ ನಡೆಸಿದ್ದಾರೆ.
ಸಭೆ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ‘ಯುದ್ಧ ಕೊನೆಗೊಳಿಸುವ ಅಂತಿಮ ಪ್ರಯತ್ನವನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್‌ಸ್ಕಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಯುದ್ಧ ಅಂತ್ಯಗೊಳಿಸಲು ಯಾವುದೇ ಗಡುವು ವಿಧಿಸಿಲ್ಲ’ ಎಂದು ತಿಳಿಸಿದ್ದಾರೆ.