ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ, ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ತಿಳಿಸಿದ್ದಾರೆ. ವಿವಿಧ ಕನ್ನಡ ಸಂಘಟನೆಗಳು ಭಾನುವಾರ ಆಯೋಜಿಸಿದ್ದ ಜನರಾಜ್ಯೋತ್ಸವ -2025ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.