ಸರ್ಕಾರಿ ಭೂಮಿ ಒತ್ತುವರಿಗೆ ಅವಕಾಶ ನೀಡಲ್ಲ: ಡಿಸಿಎಂ
ಬೆಂಗಳೂರು : ಸರ್ಕಾರಿ ಭೂಮಿಯಲ್ಲಿ ನಿರ್ಮಾಣಗೊಂಡಿದ್ದ ಶೆಡ್‌ಗಳ ತೆರವು ಕಾರ್ಯಾಚರಣೆ ನಡೆಸಿದ ನಗರದ ಕೋಗಿಲು ಕ್ರಾಸ್ ಬಳಿಯ ಫಕೀರ್ ಕಾಲೋನಿ, ವಸೀಂ ಲೇಔಟ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು, ಹೊಸದಾಗಿ ಕೊಳಗೇರಿ ನಿರ್ಮಾಣಕ್ಕೆ ಮತ್ತು ಸರ್ಕಾರಿ ಭೂಮಿ ಒತ್ತುವರಿಗೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.