ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ
ತಿರುಪತಿ: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ (ಡಿ.30, 31, ಹಾಗೂ ಜ1) ಆನ್‌ಲೈನ್ ಟಿಕೆಟ್ ಪಡೆದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಜ.8ರವರೆಗೆ ವೈಕುಂಠ ದ್ವಾರ ತೆರೆದಿರಲಿದೆ.