Bengaluru Water Bill: ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ ಇಲ್ಲೊಂದು ಗುಡ್ ನ್ಯೂಸ್!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಿಲ್ ಬಾಕಿ (Bill Pending) ಇಟ್ಟುಕೊಂಡಿರುವ ನಾಗರಿಕರಿಗೆ ಗುಡ್ ನ್ಯೂಸ್ (Good News) ನೀಡಿದೆ. ಒನ್ ಟೈಮ್ ಸೆಟಲ್‌ಮೆಂಟ್ (OTS) ಯೋಜನೆಗೆ ಸರ್ಕಾರ ಸಮ್ಮತಿ ನೀಡಿದೆ. ಬಾಕಿ ಇರುವ ನೀರಿನ ಬಿಲ್‌ನ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ ಮತ್ತು ದಂಡದ ಮೊತ್ತಕ್ಕೆ ಶೇ.100 ರಷ್ಟು ಮನ್ನಾ ನೀಡಲಾಗುವುದು. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಕ್ಸ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.