ಉಗ್ರ ನಸೀರ್‌ಗೆ ಜೈಲಲ್ಲೇ ನೆರವು ಪ್ರಕರಣ, ಮತ್ತೆ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ!
ಬೆಂಗಳೂರು: ಲಷ್ಕರ್-ಎ-ತೊಯ್ಬಾ ಸಂಘಟನೆ ಉಗ್ರ ಟೀ ನಸೀರ್‌ಗೆ ಜೈಲಿನೊಳಗೆ ಸಹಾಯ ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಪ್ರಕರಣದಲ್ಲಿ ಮೂವರು ಹೊಸ ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ. ಈಗಾಗಲೇ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದ ಎನ್‌ಐಎ, ಇದೀಗ ಹೆಚ್ಚುವರಿಯಾಗಿ ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ವಿವರಗಳನ್ನು ಸಲ್ಲಿಸಿದೆ.