2026ರ ಏಪ್ರಿಲ್ 23, 24 ರಂದು ಸಿಇಟಿ ಪರೀಕ್ಷೆ : ಸಿಇಟಿ ಪರೀಕ್ಷಾ ದಿನಾಂಕ ಘೋಷಣೆ
2026 ಸಿಇಟಿ ಪ್ರವೇಶ ಪರೀಕ್ಷೆ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ ತಿಂಗಳಲ್ಲಿ ಕಾಮನ್ ಎಂಟ್ರೇನ್ಸ್ ಪರೀಕ್ಷೆ ನಡೆಯಲಿದೆ. ಏಪ್ರಿಲ್ ತಿಂಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 23, 24ರಂದು ಎರಡು ದಿನ ಪರೀಕ್ಷೆ ನಡೆಯಲಿದೆ. ಏಪ್ರಿಲ್ 23ನೇ ತಾರೀಖು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ, ಏಪ್ರಿಲ್ 24ನೇ ತಾರೀಖು ಗಣಿತಶಾಸ್ತ್ರ ಹಾಗೂ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ 60 ಅಂಕಗಳು. ಜನವರಿ 17 ರಂದು ಆನ್ಲೈನ್ ಅಪ್ಲಿಕೇಶನ್ ಸಲ್ಲಿಕೆ ಆರಂಭವಾಗುತ್ತೆ. ಉನ್ನತ ಶಿಕ್ಷಣ & ವೈದ್ಯಕೀಯ ಶಿಕ್ಷಣ ಸಚಿವರಿಂದ ಸಿಇಟಿ ದಿಕ್ಸೂಚಿ ಬಿಡುಗಡೆಯಾಗಿದೆ. ಡಾ. ಎಂ.ಸಿ.ಸುಧಾಕರ್ ಹಾಗೂ ಡಾ.ಶರಣ ಪ್ರಕಾಶ ಪಾಟೀಲರಿಂದ ಸಿಇಟಿ ದಿಕ್ಸೂಚಿ ಬಿಡುಗಡೆಯಾಗಿದೆ.