ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಅತಿಸಾರದಿಂದ ಬಳಲುತ್ತಿರುವ ಮಂದಿ: ಮೃತರ ಸಂಖ್ಯೆ 10ಕ್ಕೆ ಏರಿಕೆ
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಉಂಟಾದ ಅತಿಸಾರದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಇಂದು ಶುಕ್ರವಾರ ಹೇಳಿದ್ದಾರೆ. ಆರು ತಿಂಗಳ ಶಿಶು ಸೇರಿದಂತೆ 14 ಜನರು ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ನಿವಾಸಿಗಳು ಹೇಳಿದ್ದಾರೆ. ಆರೋಗ್ಯ ಇಲಾಖೆ ಈ ಹೇಳಿಕೆಯನ್ನು ದೃಢಪಡಿಸಿಲ್ಲ ಮತ್ತು ಅದರ ಅಧಿಕೃತ ಮಾಹಿತಿಯು ಭಾಗೀರಥಪುರದಲ್ಲಿ ಅತಿಸಾರದಿಂದ ಮೃತಪಟ್ಟವರ ಸಂಖ್ಯೆಯನ್ನು ನಾಲ್ಕು ಎಂದು ಹೇಳುತ್ತದೆ.