Tragedy: ನರ್ಮದಾ ನದಿ ತೀರದಲ್ಲಿ 200ಕ್ಕೂ ಅಧಿಕ ಗಿಳಿಗಳ ಮಾರಣಹೋಮ... ವಿಷಪ್ರಾಶನ ಶಂಕೆ
ಮಧ್ಯಪ್ರದೇಶ: ಇಲ್ಲಿನ ನರ್ಮದಾ ನದಿ ತೀರದಲ್ಲಿ 200ಕ್ಕೂ ಹೆಚ್ಚು ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ (Bird Flu) ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಘೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದಾರೆ.