ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್‌ಐಆರ್!
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಸ್ಸಾಂ ಕಾರ್ಮಿಕರ ನೆಪದಲ್ಲಿ ಬಾಂಗ್ಲಾ ಅಕ್ರಮ ವಲಸಿಗರು ಆಶ್ರಯ ಪಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಕಾರ್ಮಿಕರ ಗುರುತು ಪತ್ರಗಳನ್ನು ಪರಿಶೀಲಿಸಿದ್ದಕ್ಕೆ, 9 ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.