Bengaluru: ಇನ್ಫೋಸಿಸ್‌ನಿಂದ 685 ಕೋಟಿ ರೂಪಾಯಿ ಸಿಎಸ್‌ಆರ್ ನಿಧಿ!
ಬೆಂಗಳೂರು (ಜ.3): ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೆಟ್ ಕಂಪನಿಗಳು ತಮ್ಮ ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್) ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ದಿಗೇ ಬಳಸುವುದನ್ನು ಕಡ್ಡಾಯಗೊಳಿಸಲು ರೂಪಿಸಿರುವ ಸ್ಪಷ್ಟ ನೀತಿಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ರಾಜ್ಯದ ಶಾಲೆಗಳ ಅಭಿವೃದ್ಧಿಗೆ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯ ಸ್ಪಷ್ಟ ಬಳಕೆಗೆ ರೂಪಿಸಿರುವ ನೀತಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದರು.