NGEFನಲ್ಲಿ 65 ಎಕರೆ Tree Park: ಲಾಲ್ ಬಾಗ್-ಕಬ್ಬನ್ ಪಾರ್ಕ್ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ವೃಕ್ಷೋದ್ಯಾನ!
ಬೆಂಗಳೂರು: ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ವೃಕ್ಷೋದ್ಯಾನ ನಿರ್ಮಾಣಕ್ಕೆ ಸರ್ಕಾರದ ಸಿದ್ಧತೆ ನಡೆಸಿದ್ದು ಇದಕ್ಕಾಗಿ ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿಯ ಎನ್.ಜಿ.ಇ.ಎಫ್ ನಲ್ಲಿ 65 ಎಕರೆ ಜಾಗ ಮೀಸಲಿರಿಸಲಾಗಿದೆ. ಬೈಯ್ಯಪ್ಪನಹಳ್ಳಿಯಲ್ಲಿದ್ದ ಸರಕಾರಿ ಸ್ವಾಮ್ಯದ ಎನ್.ಜಿ.ಇ.ಎಫ್ ಕಾರ್ಖಾನೆಗೆ ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು. ಮಾರ್ಚ್ ತಿಂಗಳಲ್ಲಿ ಮೊದಲ ಹಂತವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.