ಕರೂರ್ ಕಾಲ್ತುಳಿತ ಪ್ರಕರಣ: ಸೋಮವಾರ ಸಿಬಿಐ ಮುಂದೆ ವಿಚಾರಣೆಗೆ ವಿಜಯ್ ಹಾಜರು! ಭದ್ರತೆಗೆ ಮನವಿ
ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಜನವರಿ 12 ರಂದು ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತನಗೆ ನೀಡಿರುವ ಸಮನ್ಸ್‌ಗೆ ಅನುಗುಣವಾಗಿ ವಿಜಯ್ ಅವರು ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗಾಗಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಅವರು ಸೋಮವಾರ ಬೆಳಿಗ್ಗೆ 7 ಗಂಟೆಗೆ ಚೆನ್ನೈನಿಂದ ಚಾರ್ಟರ್ಡ್ ಫ್ಲೈಟ್ ಮೂಲಕ ನವದೆಹಲಿಗೆ ತೆರಳಲಿದ್ದು, ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.