ಬೆಂಗಳೂರಿನಲ್ಲಿದ್ದಾರೆ 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು; ಟಾಸ್ಕ್ ಫೋರ್ಸ್ ರಚನೆಗೆ ಆರ್.ಅಶೋಕ್ ಆಗ್ರಹ!
ಬೆಂಗಳೂರು (ಜ.14): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದು ರಾಜ್ಯದ ಭದ್ರತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬೆಂಗಳೂರು ನಗರದಲ್ಲಿಯೇ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.