ರಣಹದ್ದು ಸ್ವಭಾವ ಕುರಿತು ತಪ್ಪು ಮಾಹಿತಿ: ಬಿಗ್ ಬಾಸ್‌ಗೆ ಅರಣ್ಯ ಇಲಾಖೆ ನೋಟಿಸ್
ರಾಮನಗರ: ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ಷೋ ನಿರೂಪಕ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ನೀಡಿದ್ದಕ್ಕೆ ಸಂಬಂಧಿಸಿದಂತೆ, ಸ್ಪಷ್ಟೀಕರಣ ನೀಡುವಂತೆ ಕಲರ್ಸ್ ಕನ್ನಡ ವಾಹಿನಿಯ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.