ಪಿಯು - 2 ಪರೀಕ್ಷೆ : ಕೆಎಸ್ಸಾರ್ಟಿಸಿ ಬಸ್ಸಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ-ಕೋರಿಕೆಯ ನಿಲುಗಡೆ ನೀಡಬೇಕು
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಹಿಂದಿರುಗಲು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬಹುದಾಗಿದೆ. ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚಿಸಿರುವಂತೆ, ಪರೀಕ್ಷಾ ಪ್ರವೇಶ ಪತ್ರದ ಆಧಾರದಲ್ಲಿ ನಿರ್ವಾಹಕರು ಪರೀಕ್ಷಾ ಕೇಂದ್ರದ ಸಮೀಪ ಕೋರಿಕೆಯ ನಿಲುಗಡೆ ನೀಡಬೇಕು.