... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಹೊಸ ಇತಿಹಾಸ… ಫೈನಲ್​ಗೇರಿದ ಜಮ್ಮು-ಕಾಶ್ಮೀರ

ಹೊಸ ಇತಿಹಾಸ… ಫೈನಲ್​ಗೇರಿದ ಜಮ್ಮು-ಕಾಶ್ಮೀರ

Ranji Trophy Elite 2025-26: ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿ ಆಡಲು ಶುರುವಾಗಿ 55 ವರ್ಷಗಳಾಗಿವೆ. ಈ ಐವತ್ತೈದು ವರ್ಷಗಳಲ್ಲಿ ಒಮ್ಮೆಯೂ ಫೈನಲ್​ಗೆ ಪ್ರವೇಶಿಸಿರಲಿಲ್ಲ. ಆದರೆ ಈ ಬಾರಿ ಕಾಶ್ಮೀರಿ ಪಡೆ ಹೊಸ ಇತಿಹಾಸ ರಚಿಸಿದ್ದಾರೆ. ಅದು ಸಹ ಬಲಿಷ್ಠ ಬಂಗಾಳ ತಂಡಕ್ಕೆ ಸೋಲುಣಿಸುವ ಮೂಲಕ ಎಂಬುದು ವಿಶೇಷ.
ರಣಜಿ ಟೂರ್ನಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರ ತಂಡ ಫೈನಲ್​ಗೆ ಪ್ರವೇಶಿಸಿದೆ. ಕಳೆದ 55 ವರ್ಷಗಳಿಂದ ರಣಜಿ ಪಂದ್ಯವಾಡುತ್ತಿರುವ ಜಮ್ಮು-ಕಾಶ್ಮೀರ ತಂಡವು ಈ ಹಿಂದೆ ಹಲವು ಬಾರಿ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದ್ದರೂ ಸೆಮಿಫೈನಲ್ ಎಂಬುದು ಮರೀಚಿಕೆಯಾಗಿತ್ತು. ಆದರೆ ಈ ಬಾರಿ ಆಖಿಬ್ ನಬಿಯ ಮಾರಕ ದಾಳಿ ನೆರವಿನೊಂದಿಗೆ ಕಾಶ್ಮೀರಿ ಪಡೆ ಸೆಮಿಫೈನಲ್​ಗೆ ಲಗ್ಗೆಯಿಟ್ಟಿತ್ತು. ಇದೀಗ ಸೆಮಿಫೈನಲ್​ನಲ್ಲಿ ಬಲಿಷ್ಠ ಬಂಗಾಳ ತಂಡವನ್ನು ಬಗ್ಗು ಬಡಿದು ಫೈನಲ್​ಗೆ ಎಂಟ್ರಿ ಕೊಟ್ಟಿದೆ.
ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು-ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಂಗಾಳ ತಂಡಕ್ಕೆ ಆಖಿಬ್ ನಬಿ ಮಾರಕವಾಗಿ ಪರಿಣಮಿಸಿದರು. ಕರಾರುವಾಕ್ ದಾಳಿ ಸಂಘಟಿಸಿದ ನಬಿ 26 ಓವರ್​ಗಳಲ್ಲಿ 87 ರನ್ ನೀಡಿ 5 ವಿಕೆಟ್ ಉರುಳಿಸಿದರು. ಪರಿಣಾಮ ಬಂಗಾಳ ತಂಡವು 328 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದ್ದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302 ರನ್​ಗಳಿಸಿ ಆಲೌಟ್ ಆಗಿದೆ. ಬಂಗಾಳ ಪರ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಶಮಿ 22.1 ಓವರ್​ಗಳಲ್ಲಿ 90 ರನ್ ನೀಡಿ ಬರೋಬ್ಬರಿ 8 ವಿಕೆಟ್ ಕಬಳಿಸಿದ್ದರು.

Source : TV9 Kannada

1 hour ago

Home Flash News