... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಜಪಾನ್‌ನೊಂದಿಗೆ ಬೃಹತ್ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆ

ಜಪಾನ್‌ನೊಂದಿಗೆ ಬೃಹತ್ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: 'ಜಪಾನ್ ದೇಶದೊಂದಿಗೆ ಬೃಹತ್ ವ್ಯಾಪಾರ ಒಪ್ಪಂದ ಇದೀಗ ಪ್ರಾರಂಭವಾಗಿದೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ 'ಟ್ರುಥ್'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ಜಪಾನ್ ಈಗ ಅಧಿಕೃತವಾಗಿ ಹಾಗೂ ಆರ್ಥಿಕವಾಗಿ ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ 550 ಬಿಲಿಯನ್ ಡಾಲರ್ ಹೂಡಿಕೆ ಬದ್ಧತೆಯ ಅಡಿಯಲ್ಲಿ ಮೊದಲ ಕಂತನ್ನು ಪ್ರಾರಂಭಿಸುತ್ತಿದೆ' ಎಂದು ಟ್ರಂಪ್ ತಿಳಿಸಿದ್ದಾರೆ.

 'ಅಮೆರಿಕದ ಕೈಗಾರಿಕಾ ನೆಲೆಯನ್ನು ಪುನರುಜ್ಜೀವನಗೊಳಿಸುವ, ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು ರಾಷ್ಟ್ರೀಯ ಹಾಗೂ ಆರ್ಥಿಕ ಭದ್ರತೆ ಬಲಗೊಳಿಸುವ ಹಿಂದೆಂದಿಗಿಂತಲೂ ಐತಿಹಾಸಿಕ ಒಪ್ಪಂದ ಇದಾಗಿದೆ' ಎಂದು ಅವರು ಉಲ್ಲೇಖಿಸಿದ್ದಾರೆ.  'ಟೆಕ್ಸಾಸ್‌ನಲ್ಲಿ ತೈಲ, ಅನಿಲ, ಒಹಿಯೊದಲ್ಲಿ ವಿದ್ಯುತ್ ಉತ್ಪಾದನೆ ಹಾಗೂ ಜಾರ್ಜಿಯಾದಲ್ಲಿ ಅಪರೂಪದ ಖನಿಜಗಳಂತಹ ಕಾರ್ಯತಂತ್ರದ ಕ್ಷೇತ್ರಗಳಲ್ಲಿ ಮೂರು ಮಹತ್ವದ ಯೋಜನೆಗಳನ್ನು ಇದು ಒಳಗೊಂಡಿದೆ' ಎಂದು ತಿಳಿಸಿದ್ದಾರೆ. 

 'ಈ ಯೋಜನೆಗಳ ಪ್ರಮಾಣವು ಬೃಹತ್ತಾಗಿದ್ದು, 'ಸುಂಕ' ಎಂಬ ವಿಶೇಷ ಪದ ಇಲ್ಲದೆ ಇದನ್ನು ಮಾಡಲು ಸಾಧ್ಯವಿಲ್ಲ' ಎಂದೂ ಟ್ರಂಪ್ ಹೇಳಿದ್ದಾರೆ. 'ಒಹಿಯೊದಲ್ಲಿ ಬೃಹತ್ ಅನಿಲ ಇಂಧನ ಘಟಕವು ಇತಿಹಾಸದಲ್ಲೇ ದೊಡ್ಡದಾಗಿರಲಿದ್ದು, ದೇಶದ ಇಂಧನ ಅಧಿಪತ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ. ಅಪರೂಪದ ಖನಿಜಗಳ ಘಟಕದೊಂದಿಗೆ ಬೇರೆ ದೇಶಗಳ ಮೇಲಿನ ಅವಲಂಬನೆಯು ಇಲ್ಲವಾಗಲಿದೆ' ಎಂದು ಹೇಳಿದ್ದಾರೆ. 'ಅಮೆರಿಕ ಪುನರ್ ನಿರ್ಮಾಣವಾಗುತ್ತಿದೆ. ಅಮೆರಿಕದಲ್ಲಿ ಉತ್ಪಾದನೆಯಾಗುತ್ತಿದೆ. ಅಮೆರಿಕ ಮತ್ತೆ ಗೆಲ್ಲುತ್ತದೆ. ಅಮೆರಿಕ ಹಾಗೂ ಜಪಾನ್ ಪಾಲಿಗಿದು ಐತಿಹಾಸಿಕ. ಎಲ್ಲರಿಗೂ ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

Source : Prajavani

1 hour ago

Home Flash News