... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳನ್ನು ಸರ್ಕಾರ ಯಾವುದೇ ರೀತಿಯಲ್ಲೂ ಸಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಜನರಿಗೆ ಭಯಮುಕ್ತ ಹಾಗೂ ನೆಮ್ಮದಿಯ ಬದುಕು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ನಿಷ್ಪಕ್ಷಪಾತ ತನಿಖೆ ಮಾಡಲು ಸೂಚನೆ ನೀಡಿದ್ದಾಗಿ ಹೇಳಿದ್ದಾರೆ. 

ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿರುವ ಅವರು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ ಎಂದು ಹೇಳಿದ್ದಾರೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದ್ದು, ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source : Prajavani

2 hours ago

Home Flash News