... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲು

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲು

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದವು ಭಾರತೀಯ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಇದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಮಂಗಳವಾರ ಭೋಪಾಲ್‌ನಲ್ಲಿ ನಡೆದ ‘ಕಿಸಾನ್ ಮಹಾಚೌಪಾಲ್’ ಬೃಹತ್ ರೈತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 ಈ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಭಾರತೀಯ ರೈತರ ಎದೆಗೆ ಚುಚ್ಚಿದ ಬಾಣಕ್ಕೆ ಹೋಲಿಸಿದ ರಾಹುಲ್ ಗಾಂಧಿ, "ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಈ ಒಪ್ಪಂದವನ್ನು ರದ್ದುಗೊಳಿಸುವಂತೆ ನಾನು ಪ್ರಧಾನಿ ಮೋದಿಯವರಿಗೆ ಸವಾಲು ಹಾಕುತ್ತೇನೆ. ಆದರೆ ಅವರು ಅದನ್ನು ಮಾಡಲು ಸಾಧ್ಯವಿಲ್ಲ," ಎಂದು ಲೇವಡಿ ಮಾಡಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡಕ್ಕೆ ಮಣಿದು ಪ್ರಧಾನಿ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಪ್ಸ್ಟೀನ್ ಫೈಲ್ಸ್ (Epstein files) ಭಯ ಮತ್ತು ಉದ್ಯಮಿ ಅದಾನಿಯವರನ್ನು ರಕ್ಷಿಸುವ ಉದ್ದೇಶದಿಂದ ದೇಶದ ಹಿತಾಸಕ್ತಿಯನ್ನು ಬಲಿಕೊಡಲಾಗಿದೆ ಎಂದು ಆರೋಪ ಮಾಡಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿತಿನ್ ಗಡ್ಕರಿಯವರಂತಹ ಹಿರಿಯ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ.

Source : Udayavani

9 hours ago

Home Flash News