Virosh Wedding: ಒಂದೇ ದಿನ ಎರಡು ಬಾರಿ ಮದುವೆ ಆಗಲಿದ್ದಾರೆ ರಶ್ಮಿಕಾ – ದೇವರಕೊಂಡ.!
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) - ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ (Virosh Wedding) ಗುರುವಾರ (ಫೆ.26) ರಂದು ನಡೆಯಲಿದೆ.
ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮಗಳು ಇಂದು (ಫೆ.25) ನಡೆಯಲಿವೆ. ನಾಳೆ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ.
ಸಾಮಾನ್ಯವಾಗಿ ಸೆಲೆಬ್ರಿಟಿಗಳ ಮದುವೆಯಲ್ಲಿ ಎರಡೂ ಕುಟುಂಬದ ಸಂಪ್ರದಾಯ – ಆಚರಣೆಗಳಿಗೆ ಹೆಚ್ಚಿನ ಗೌರವ ಇರುತ್ತದೆ. ದೇವರಕೊಂಡ – ರಶ್ಮಿಕಾ ಅವರ ಮದುವೆ ವಿಚಾರದಲ್ಲೂ ಹೀಗೆಯೇ ಆಗಲಿದೆ.
ಗುರುವಾರ ಬೆಳಿಗ್ಗೆ ದೇವರಕೊಂಡ ಅವರ ಪರಂಪರೆಯನ್ನು ಪ್ರತಿನಿಧಿಸುವ ತೆಲುಗು - ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಅದೇ ದಿನ ಸಂಜೆ ರಶ್ಮಿಕಾ ಅವರ ಕೊಡವ ಸಂಪ್ರದಾಯದ ಅನುಸಾರವಾಗಿ ಮದುವೆ ನಡೆಯಲಿದೆ.
ಎರಡೂ ಕುಟುಂಬಗಳ ಸಂಪ್ರದಾಯಗಳನ್ನು ಗೌರವಿಸುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ಅದ್ಧೂರಿ ರಿಸೆಪ್ಷನ್ ನಡೆಯಲಿದ್ದು, ಈ ಸಮಾರಂಭಕ್ಕೆ ಹಲವು ಗಣ್ಯರು, ರಾಜಕಾರಣಿಗಳು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ.