Israel-Iran| ಭಾರತೀಯರ ರಕ್ಷಣೆಗೆ ಕೇಂದ್ರವು ತಕ್ಷಣ ಕ್ರಮಕೈಗೊಳ್ಳಲಿ: ರಾಹುಲ್
ನವದೆಹಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿರುವುದು ಕಳವಳಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ. ಮಧ್ಯಪ್ರಾಚ್ಯದಲ್ಲಿರುವ ಪ್ರತಿಯೊಬ್ಬ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ರಕ್ಷಣೆಯು ನಮ್ಮ ಆದ್ಯತೆಯಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಈ ಕುರಿತು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.