... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬಾಲಕಿಯರ ಆರೋಗ್ಯ ರಕ್ಷಣೆಗೆ ಮೋದಿ ಪಣ: ರಾಷ್ಟ್ರವ್ಯಾಪಿ HPV ಲಸಿಕೆ ಅಭಿಯಾನಕ್ಕೆ ಚಾಲನೆ

ಬಾಲಕಿಯರ ಆರೋಗ್ಯ ರಕ್ಷಣೆಗೆ ಮೋದಿ ಪಣ: ರಾಷ್ಟ್ರವ್ಯಾಪಿ HPV ಲಸಿಕೆ ಅಭಿಯಾನಕ್ಕೆ ಚಾಲನೆ

ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶನಿವಾರ (ಫೆ.28) ಐತಿಹಾಸಿಕ ಕ್ರಮ ಕೈಗೊಂಡಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV) ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, "ನಮ್ಮ ಸರ್ಕಾರವು ದೇಶದ ಪ್ರತಿಯೊಂದು ಸ್ತರದಲ್ಲಿ ಅಭಿವೃದ್ಧಿ ತರಲು ಬದ್ಧವಾಗಿದೆ. 

ಈ HPV ಲಸಿಕಾ ಅಭಿಯಾನವು ದೇಶದ ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಮೈಲಿಗಲ್ಲಾಗಲಿದೆ. ಇಂದು ಕೇವಲ ಲಸಿಕೆಗೆ ಚಾಲನೆ ನೀಡಿರುವುದು ಮಾತ್ರವಲ್ಲದೆ, ಕೋಟ್ಯಂತರ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಯುವಜನತೆಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸುವ ಸೌಭಾಗ್ಯ ನಮಗೆ ಲಭಿಸಿದೆ," ಎಂದು ಹರ್ಷ ವ್ಯಕ್ತಪಡಿಸಿದರು. ಈ ಅಭಿಯಾನದ ಅನ್ವಯ ಪ್ರತಿ ವರ್ಷ ದೇಶದಾದ್ಯಂತ ಸುಮಾರು 1.15 ಕೋಟಿ ಹೆಣ್ಣುಮಕ್ಕಳಿಗೆ (14 ವರ್ಷ ವಯಸ್ಸಿನವರಿಗೆ) ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈ ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ.

 ಭಾರತದಲ್ಲಿ ಮಹಿಳೆಯರನ್ನು ಕಾಡುತ್ತಿರುವ ಕ್ಯಾನ್ಸರ್‌ಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಎರಡನೇ ಅತಿ ದೊಡ್ಡ ಕಾಯಿಲೆಯಾಗಿದೆ. ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 1.20 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸುಮಾರು 80,000 ಮಹಿಳೆಯರು ಈ ಕಾಯಿಲೆಯಿಂದ ಮೃತಪಡುತ್ತಿದ್ದಾರೆ. ಈ ಕ್ಯಾನ್ಸರ್ ಬರಲು ಮುಖ್ಯ ಕಾರಣ HPV ವೈರಸ್. ಅದರಲ್ಲೂ 16 ಮತ್ತು 18ನೇ ಮಾದರಿಯ ವೈರಸ್‌ಗಳು ಶೇ. 80ಕ್ಕಿಂತ ಹೆಚ್ಚು ಪ್ರಕರಣಗಳಿಗೆ ಕಾರಣವಾಗುತ್ತವೆ. ಇದನ್ನು ತಡೆಯಲು ಲಸಿಕೆ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ.

Source : Udayavani

7 hours ago

Home Flash News