... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್,

ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ

ಕೋಲ್ಕತಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಸೂಪರ್ 8 ಹಂತದಲ್ಲಿ ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ದ ಮಹತ್ವದ ಪಂದ್ಯದಲ್ಲಿ 5 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಹೋರಾಟ ನಡೆಸಲಿದೆ. ಈ ಪಂದ್ಯ ಮಾರ್ಚ್ 5ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತಕ್ಕೆ 196 ರನ್ ಟಾರ್ಗೆಟ್ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಕ್ವಾರ್ಟರ್ ಫೈನಲ್ ಸ್ವರೂಪ ಪಡೆದುಕೊಂಡಿತ್ತು. 

ಕಾರಣ ಗೆದ್ದ ತಂಡ ಸೆಮಿಫೈನಲ್ ಪ್ರವೇಶಿಸಿದರೆ, ಸೋತ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಪಂದ್ಯ ಮತ್ತಷ್ಟು ಕುತೂಹಲ ಮೂಡಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 195 ರನ್ ಸಿಡಿಸಿತ್ತು. ಮಹತ್ವದ ಪಂದ್ಯದಲ್ಲಿ ಭಾರತಕ್ಕೆ 196 ರನ್ ಚೇಸ್ ಮಾಡಬೇಕಾದ ಸವಾಲು ಎದುರಾಗಿತ್ತು. ಟಾರ್ಗೆಟ್ ಚೇಸ್ ಆರಂಭದಲ್ಲಿ ಅಭಿಷೇಕ್ ಶರ್ಮಾ ನಿರಾಸೆ ಮೂಡಿಸಿದೆ. ಶರ್ಮಾ ಕೇವಲ 10 ರನ್ ಸಿಡಿಸಿ ನಿರ್ಗಮಿಸಿದರು. ಇದರ ಬೆನ್ನಲ್ಲೇ ಇಶಾನ್ ಕಿಶನ್ ವಿಕೆಟ್ ಪತನಗೊಂಡಿತ್ತು. ಆದರೆ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಟೀಂ ಇಂಡಿಯಾ ಅಭಿಮಾನಿಗಳ ಆತಂಕ ದೂರ ಮಾಡಿತ್ತು. ನಾಯಕ ಸೂರ್ಯಕುಮಾರ್ ಯಾದವ್ ಹೆಚ್ಚು ಹೆಚ್ಚು ಅಬ್ಬರಿಸಲಿಲ್ಲ. 

ಕೇವಲ 18 ರನ್ ಸಿಡಿಸಿ ನಿರ್ಗಮಿಸಿದರು. ಅಬ್ಬರಿಸಿದ ಸ್ಯಾಮ್ಸನ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು ತಿಲಕ್ ವರ್ಮಾ ಜೊತೆ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದರು. ಆದೆರೆ ತಿಲಕ್ ವರ್ಮಾ 27 ರನ್ ಸಿಡಿಸಿ ನಿರ್ಗಮಿಸಿದರು. ಸಂಜು ಸ್ಯಾಮ್ಸನ್ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟಕ್ಕೆ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಜವಾಬ್ದಾರಿ ಹೆಗಲೇರಿತ್ತು. ಅಂತಿಮ 12 ಎಸೆತದಲ್ಲಿ ಭಾರತದ ಗೆಲುವಿಗೆ 17 ರನ್ ಅವಶ್ಯಕತೆ ಇತ್ತು. ಇದೇ ವೇಳೆ 17 ರನ್ ಸಿಡಿಸಿದ್ದ ಹಾರ್ದಿಕ್ ಪಾಂಡ್ಯ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಶಿವಂ ದುಬೆ ಹಾಗೂ ಸಂಜು ಸ್ಯಾಮ್ಸನ್ ಜೊತೆಯಾಟ ಆರಂಭಗೊಂಡಿತು. ಕೊನೆಯ 6 ಎಸೆತದಲ್ಲಿ 7 ರನ್ ಅವಶ್ಯಕತೆ ಇತ್ತು. ಮೊದಲ ಎಸೆತದಲ್ಲಿ ಸಂಜು ಸಿಕ್ಸರ್ ಸಿಡಿಸಿದರು. ಎರಡನೇ ಎಸೆತದಲ್ಲಿ ಬೌಂಡರಿ ಸಿಡಿಸಿದರು. ಈ ಮೂಲಕ ಭಾರತ 5 ವಿಕೆಟ್ ಕಳೆದುಕೊಂಡು 19.2 ಓವರ್‌ಗಳಲ್ಲಿ ಗುರಿ ತಲುಪಿದೆ. ಭಾರತ 5 ವಿಕೆಟ್ ಗೆಲುವು ದಾಖಲಿಸಿತು. ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿ ಭಾರತಕ್ಕೆ ಅದ್ಭುತ ಗೆಲುವು ನೀಡಿದರು.

Source : Asianet News

1 day ago

Home Flash News