‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್
ದಿ ಕೇರಳ ಸ್ಟೋರಿ 2 ಸಿನಿಮಾ ವಿವಾದಗಳ ನಡುವೆಯೂ ತೆರೆಕಂಡಿದೆ. ಲವ್ ಜಿಹಾದ್ ಕಥಾಹಂದರದಿಂದಾಗಿ ಕೋರ್ಟ್ ತಡೆಯನ್ನು ಎದುರಿಸಿತ್ತು. ಮೊದಲ ದಿನ ಕೇವಲ 75 ಲಕ್ಷ ರೂ. ಗಳಿಕೆ ಮಾಡಿದರೂ, ಶನಿವಾರ ಮತ್ತು ಭಾನುವಾರ ಭರ್ಜರಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ಈ ಚಿತ್ರದ ಯಶಸ್ಸು ವಿವಾದಗಳನ್ನು ಮೀರಿ ಬೆಳೆದಿದೆ. ಉಲ್ಕಾ ಗುಪ್ತಾ ನಟನೆಯ ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದವು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಚಿತ್ರದ ರಿಲೀಸ್ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ.
‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಓಝಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.ಈ ಚಿತ್ರದ ರಿಲೀಸ್ಗೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿತ್ತು. ಶುಕ್ರವಾರ ಸಿನಿಮಾ ತೆರೆಗೆ ಬಂದಿದೆ.
ಮೊದಲ ದಿನ ಈ ಚಿತ್ರ 75 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 4.65 ಕೋಟಿ ರೂಪಾಯಿ ಹಾಗೂ 5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಲ್ಲಿ ಏರಿಕೆ ಕಂಡಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ವಿವಾದ ಸೃಷ್ಟಿಸಿದೆ.