... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಜೋರಾಯ್ತು ಕುರ್ಚಿ ಪಾಲಿಟಿಕ್ಸ್​;​ ಡಿನ್ನರ್​ ಮೀಟಿಂಗ್ ಕರೆದ ಡಿಕೆಶಿ; ಸಿದ್ದರಾಮಯ್ಯಗೂ ಇದ್ಯಾ ಆಹ್ವಾನ?

DK Shivakumar: ಜೋರಾಯ್ತು ಕುರ್ಚಿ ಪಾಲಿಟಿಕ್ಸ್​;​ ಡಿನ್ನರ್​ ಮೀಟಿಂಗ್ ಕರೆದ ಡಿಕೆಶಿ; ಸಿದ್ದರಾಮಯ್ಯಗೂ ಇದ್ಯಾ ಆಹ್ವಾನ?

ಬೆಂಗಳೂರು: ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಹಾಗೂ ಡಿಸಿಎಂ ಬಣಗಳು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದು, ಕುರ್ಚಿ ಕಾದಾಟಕ್ಕೆ ಕಿಚ್ಚು ಹಚ್ಚಿದ್ದಾರೆ. ಗೊಂದಲಕ್ಕೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಡಿನ್ನರ್​ ಮೀಟಿಂಗ್ ಕರೆದಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕುರ್ಚಿ ಕಾದಾಟ ನಡುವೆ ಡಿಕೆಶಿ ಡಿನ್ನರ್ ಮೀಟಿಂಗ್​ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಮಾರ್ಚ್​ 10ರಂದು ಡಿಕೆಶಿ ಡಿನ್ನರ್​ ಮೀಟಿಂಗ್ ಬಜೆಟ್ ಅಧಿವೇಶನದ ನಡುವೆ ಮಾರ್ಚ್​ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜನೆ ಮಾಡಿದ್ದಾರೆ. ಕಾಂಗ್ರೆಸ್​​ನ ಶಾಸಕರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್​ ಅವರು ಔತಕೂಟ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯಗೂ ಇದ್ಯಾ ಆಹ್ವಾನ? ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಬಣದ ಎಲ್ಲಾ ಶಾಸಕರನ್ನು ಕೂಡ ಈ ಔತಣ ಕೂಟಕ್ಕೆ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಹಿಂದೆ ಬ್ರೇಕ್​ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಸಿಎಂ-ಡಿಸಿಎಂ ಈಗಲೂ ಅದೇ ತಂತ್ರದ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಡಿಕೆಶಿ ಆಯೋಜಿಸಿರುವ ಡಿನ್ನರ್​ ಮೀಟಿಂಗ್​​ಗೆ ಸಿಎಂ ಸಿದ್ದರಾಮಯ್ಯ ಅವರನ್ನ ಕೂಡ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ನಾಯಕತ್ವ ಬದಲಾವಣೆ ಬಗ್ಗೆ ಸಚಿವರು ಹಾಗೂ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಹೊತ್ತಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್​ ಮೀಟಿಂಗ್​ಗೆ ಕರೆದಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಭೆಗೆ ಯಾರ್ಯಾರಿಗೆ ಆಹ್ವಾನ ನೀಡ್ತಾರೆ. ಯಾರ್ಯಾರು ಬರ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

Source : News18 Kannada

1 hour ago

Home Flash News