... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಭಾರತದ ಮೇಲೆ ಇರಾನ್-ಇಸ್ರೇಲ್ ತೈಲ ರಾಷ್ಟ್ರಗಳ ಯುದ್ಧ ಎಫೆಕ್ಟ್;

ಭಾರತದ ಮೇಲೆ ಇರಾನ್-ಇಸ್ರೇಲ್ ತೈಲ ರಾಷ್ಟ್ರಗಳ ಯುದ್ಧ ಎಫೆಕ್ಟ್; ವಾಣಿಜ್ಯ LPG ಸಿಲಿಂಡರ್‌ ಡಿಸ್ಕೌಂಟ್ ಕ್ಯಾನ್ಸಲ್!

ಬೆಂಗಳೂರು (ಮಾ.04): ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ (Middle East Countries) ಉಂಟಾಗಿರುವ ಭೌಗೋಳಿಕ ಮತ್ತು ರಾಜಕೀಯ ಉದ್ವಿಗ್ನತೆಯ ಪರಿಣಾಮ ಈಗ ನೇರವಾಗಿ ಭಾರತದ ಗ್ರಾಹಕರ ಜೇಬಿನ ಮೇಲೆ ತಟ್ಟಲಾರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಮತ್ತು ಅನಿಲ ದರಗಳಲ್ಲಿ ಏರುಪೇರಾಗುತ್ತಿದ್ದು, ಇದರ ಮೊದಲ ಹಂತವಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಮೇಲಿನ ಎಲ್ಲಾ ರಿಯಾಯಿತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.
ವಾಣಿಜ್ಯ ಬಳಕೆದಾರರಿಗೆ ಬಿಗ್ ಶಾಕ್: ಬೆಂಗಳೂರಿನ ಇಂಡೇನ್ ವಿತರಕರಾದ 'ರಶ್ಮಿ ಡಿಸ್ಟ್ರಿಬ್ಯೂಟರ್ಸ್' ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಈವರೆಗೆ 19 ಕೆಜಿ ಮತ್ತು 47.5 ಕೆಜಿ ತೂಕದ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗುತ್ತಿದ್ದ ರಿಯಾಯಿತಿಯನ್ನು (Discounts) ಸ್ಥಗಿತಗೊಳಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಉನ್ನತ ಅಧಿಕಾರಿಗಳ ನಿರ್ದೇಶನದ ಮೇರೆಗೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಯಾವುದೇ ಡಿಸ್ಕೌಂಟ್ ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

 ಹೋಟೆಲ್‌ ಉದ್ಯಮಕ್ಕೆ ಭಾರಿ ಹೊರೆ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಕೈಗಾರಿಕೆಗಳಿಗೆ ಈ ನಿರ್ಧಾರವು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಾಣಿಜ್ಯ ಸಿಲಿಂಡರ್‌ಗಳ ಮೇಲೆ ಸಿಗುತ್ತಿದ್ದ ರಿಯಾಯಿತಿ ರದ್ದಾಗಿರುವುದರಿಂದ, ಪ್ರತಿ ಸಿಲಿಂಡರ್‌ನ ಬೆಲೆಯಲ್ಲಿ ಗಣನೀಯ ಏರಿಕೆಯಾಗಲಿದೆ. ಇದು ಹೋಟೆಲ್‌ಗಳ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲಿದ್ದು, ಅಂತಿಮವಾಗಿ ಹೋಟೆಲ್ ಊಟ ಮತ್ತು ತಿಂಡಿಗಳ ಬೆಲೆ ಏರಿಕೆಗೆ ದಾರಿ ಮಾಡಿಕೊಡುವ ಸಾಧ್ಯತೆಯಿದೆ.

Source : Asianet News

1 hour ago

Home Flash News