... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ದಿಕ್ಕು ನಿರ್ಧರಿಸುವ ಮಹತ್ವದ ಬಜೆಟ್ ಇದಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ಆಯವ್ಯಯ ಸಂಬಂಧಿತ ಮಹತ್ವದ ಮಾಹಿತಿ ಇಲ್ಲಿದೆ.
ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ. ಇದೀಗ ಬಜೆಟ್ ಮಂಡನೆಯಲ್ಲಿಯೂ ದಾಖಲೆ ನಿರ್ಮಿಸಲಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ ಆಯವ್ಯಯದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲವು ಯೋಜನೆಗಳಲ್ಲಿ ಬದಲಾವಣೆಗಳು ಆಗಬಹುದೇ ಎಂಬ ಕುತೂಹಲವೂ ಮೂಡಿದೆ. ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಜ್ಯದ ಜನತೆ ಮತ್ತು ವಿವಿಧ ವಲಯಗಳು ಈ ಬಜೆಟ್‌ ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ.

Source : TV9 Kannada

1 hour ago

Home Flash News