... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಅಡುಗೆ ಅನಿಲ ಕೊರತೆ ವದಂತಿಗೆ ಕಿವಿಗೊಡಬೇಡಿ:

ಅಡುಗೆ ಅನಿಲ ಕೊರತೆ ವದಂತಿಗೆ ಕಿವಿಗೊಡಬೇಡಿ: ಪೂರೈಕೆ ಸ್ಥಿರ, ದಾಸ್ತಾನು ಲಭ್ಯ

ಕಾರ್ಕಳ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಅಡುಗೆ ಅನಿಲ (ಎಲ್‌ಪಿಜಿ) ಕೊರತೆಯಾಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಎಸಿಎಲ್‌ ) ಡೀಲರ್ಸ್ ಅಸೋಸಿಯೇಶನ್ ರಾಜ್ಯ ಉಪಾಧ್ಯಕ್ಷ ನಿತ್ಯಾನಂದ ಪೈ ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಎಲ್ಲಾ ಡೀಲರ್‌ಗಳ ಬಳಿ ಗ್ಯಾಸ್ ದಾಸ್ತಾನು ಇದ್ದು, ಯಾವುದೇ ಕೊರತೆಯಾಗಿಲ್ಲ.

 ಈ ಕುರಿತು ಎಚ್‌ಪಿಸಿಎಲ್ ಸಂಸ್ಥೆಯೂ ಅಧಿಕೃತ ಮಾಹಿತಿ ನೀಡಿದ್ದು, ದೇಶದಲ್ಲಿ ಇಂಧನ ಭದ್ರತೆ ಬಲಿಷ್ಠವಾಗಿದೆ. ಇಂಧನ ಲಭ್ಯತೆಯ ಬಗ್ಗೆ ಆತಂಕ ಬೇಡ, ದೇಶಾದ್ಯಂತ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಮಾರ್ಗಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ: ಒಂದು ಕುಟುಂಬಕ್ಕೆ ವರ್ಷಕ್ಕೆ ಗರಿಷ್ಠ 15 ಸಿಲಿಂಡರ್‌ಗಳ ಬಳಕೆಯ ಮಿತಿ ಇದೆ. ಆದರೆ ಸದ್ಯದ ಸೂಚನೆಯಂತೆ, ಹೊಸದಾಗಿ ಗ್ಯಾಸ್ ಬುಕ್ ಮಾಡಲು ಬುಕ್ಕಿಂಗ್ ದಿನಾಂಕದಿಂದ ಮುಂದಿನ ಬುಕ್ಕಿಂಗ್‌ ದಿನಾಂಕಕ್ಕೆ ಕನಿಷ್ಠ ಒಂದು ತಿಂಗಳು ಪೂರ್ಣಗೊಂಡಿರಬೇಕು ಎಂದು ಅವರು ತಿಳಿಸಿದ್ದಾರೆ

Source : Udayavani

1 hour ago

Home Flash News