... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

Karnataka Budget 2026: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಜೊತೆಗೆ, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ಹೊಸದುರ್ಗ-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸುವ ಯೋಜನೆಗಳನ್ನೂ ಪ್ರಕಟಿಸಲಾಗಿದೆ. ಈ ಕ್ರಮಗಳು ರಾಜ್ಯದ ಆರೋಗ್ಯ ಮೂಲಸೌಕರ್ಯ ಬಲಪಡಿಸುವ ಗುರಿ ಹೊಂದಿವೆ.
ಬೆಂಗಳೂರು, ಮಾರ್ಚ್​ 06: ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2026ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ಹೆಸರು ಬದಲಾವಣೆಯು ರಾಜ್ಯದ ಗೌರವಾನ್ವಿತ ವ್ಯಕ್ತಿಗೆ ಸಲ್ಲಿಸಲಾದ ಗೌರವವಾಗಿದೆ. ದಕ್ಷಿಣ ಭಾರತದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ವಿಕ್ಟೋರಿಯಾ ಆಸ್ಪತ್ರೆ ತನ್ನ 125 ವರ್ಷಗಳ ಸುದೀರ್ಘ ಹಾಗೂ ಐತಿಹಾಸಿಕ ಪಯಣವನ್ನು ಮುಂದುವರಿಸಿಕೊಂಡು ಬಂದಿದೆ. ಬೆಂಗಳೂರಿನ ಹೃದಯಭಾಗದಲ್ಲಿದ್ದ ಈ ಆಸ್ಪತ್ರೆ ಕೇವಲ ಚಿಕಿತ್ಸಾ ಕೇಂದ್ರವಾಗಿರದೇ, ನಗರದ ಬೆಳವಣಿಗೆಯ ಪ್ರಮುಖ ಸಾಕ್ಷಿಯಾಗಿಯೂ ಗುರುತಿಸಿಕೊಂಡಿದೆ.

 ವಿಕ್ಟೋರಿಯಾ ಆಸ್ಪತ್ರೆಯ ಉದಯ 1897ರಲ್ಲಿ ರಾಣಿ ವಿಕ್ಟೋರಿಯಾ ಅವರ ಪಟ್ಟಾಭಿಷೇಕದ ವಜ್ರ ಮಹೋತ್ಸವದ ನೆನಪಿಗಾಗಿ ಈ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ಮೈಸೂರು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ ಸನ್ನಿಧಾನ ಅವರು ನೆರವೇರಿಸಿದ್ದರು. 1900ರಲ್ಲಿ ಉದ್ಘಾಟನೆಗೊಳ್ಳಬೇಕಿದ್ದರೂ, 1898ರಲ್ಲಿ ಬೆಂಗಳೂರನ್ನು ಕಾಡಿದ ಭೀಕರ ಪ್ಲೇಗ್ ಸಾಂಕ್ರಾಮಿಕದ ಹಿನ್ನೆಲೆ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಿ, ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಮುಂಚಿತವಾಗಿಯೇ ಸಿದ್ಧಪಡಿಸಲಾಗಿತ್ತು. ನಂತರ 1900ರ ಡಿಸೆಂಬರ್ 8ರಂದು ವೈಸರಾಯ್ ಲಾರ್ಡ್ ಕರ್ಜನ್ ಅವರಿಂದ ಆಸ್ಪತ್ರೆ ಅಧಿಕೃತವಾಗಿ ಉದ್ಘಾಟನೆಗೊಂಡಿತ್ತು.

Source : Udayavani

2 hours ago

Home Flash News