... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಬರೋಬ್ಬರಿ 253 ರನ್​ ಬಾರಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 253 ರನ್​ ಕಲೆಹಾಕಿದರೆ, ಇಂಗ್ಲೆಂಡ್ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು. ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India).

 ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.  ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್​ಗಳಿಸಿದ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿತ್ತು.

 ಸನ್​ರೈಸರ್ಸ್ ಹೈದರಾಬಾದ್ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 5 ಬಾರಿ 250+ ಸ್ಕೋರ್​ಗಳಿಸಿ ಈ ದಾಖಲೆ ನಿರ್ಮಿಸಿದ್ದರು. 287/3 (vs RCB, 2024), 286/6 (vs RR, 2025), 278/3 (vs KKR, 2025), 277/3 (vs MI, 2024), 266/7 (vs DC, 2024). ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ. ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 6 ಬಾರಿ 250+ ಸ್ಕೋರ್​ಗಳಿಸಿದ್ದಾರೆ. 297/6 (vs BAN, 2024), 283/1 (vs SA, 2024), 271/5 (vs NZ, 2026), 260/5 (vs SL, 2017), 256/4 (vs ZIM, 2026), 253/7 (vs ENG, 2026) ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್​ಗಳಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

Source : TV9 Kannada

29 days ago

Home Flash News