... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್‌ಗೆ ಆರ್‌.ಅಶೋಕ್ ಟೀಕೆ

ರಾಜ್ಯದ ಭವಿಷ್ಯ ಅಡಮಾನ: ಸಿದ್ದರಾಮಯ್ಯ ಬಜೆಟ್‌ಗೆ ಆರ್‌.ಅಶೋಕ್ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಪ್ರತಿಕ್ರಿಯಿಸಿದ್ದು, ‘ಕರ್ನಾಟಕದ ಆರ್ಥಿಕತೆ ಅಧೋಗತಿಗೆ ತಲುಪಿದ್ದು, ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯದ ಭವಿಷ್ಯ ಅಡಮಾನ ಇಟ್ಟಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಜೆಟ್‌ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಕೊಡುತ್ತೇವೆ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಇಂದು ಕರ್ನಾಟಕದಲ್ಲಿ ‘ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ’ ಎಂಬ ಸ್ಥಿತಿ ನಿರ್ಮಿಸಿದೆ ಎಂದು ಟೀಕಿಸಿದ್ದಾರೆ.

 ‘ಜನರ ಕೆಂಗಣ್ಣಿಗೆ ಗುರಿಯಾಗಿ ಮುಜುಗರಕ್ಕೀಡಾಗುವ ಪರಿಸ್ಥಿತಿ ಬಂದಾಗಲೆಲ್ಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರನ್ನು ದಿಕ್ಕು ತಪ್ಪಿಸುವ ಚಳಿಯನ್ನು ಬಜೆಟ್‌ನಲ್ಲಿಯೂ ಮುಂದುವರೆಸಿರುವ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲೂ ಅದೇ ಚಾಳಿ ಪ್ರದರ್ಶನ ಮಾಡಿದ್ದಾರೆ. ರಾಜ್ಯದ ಆರ್ಥಿಕ ಭವಿಷ್ಯಕ್ಕೆ ಸ್ಪಷ್ಟ ದಿಕ್ಕು ನೀಡಬೇಕಾದ ಬಜೆಟ್‌ನಲ್ಲಿ ವಾಸ್ತವ ಸ್ಥಿತಿಗತಿಗಳನ್ನು ಪ್ರಾಮಾಣಿಕವಾಗಿ ಹೇಳುವ ಬದಲು ಕಟ್ಟು ಕಥೆಗಳನ್ನು ಹೇಳುತ್ತಾ ಕಾಲಹರಣ ಮಾಡಲಾಗಿದೆ’ ಎಂದು ಗುಡುಗಿದ್ದಾರೆ. ‘ಕಾಂಗ್ರೆಸ್ ಸರ್ಕಾರದ ಸಾಲದ ಪ್ರಮಾಣವೇ ಅದರ ಆರ್ಥಿಕ ನಿರ್ವಹಣೆಯ ನಿಜ ಮುಖವನ್ನು ಬಯಲಿಗೆಳೆಯುತ್ತದೆ.

 2023–24ರಲ್ಲಿ ಸುಮಾರು ₹82,000 ಕೋಟಿ, 2024–25ರಲ್ಲಿ ₹1.05 ಲಕ್ಷ ಕೋಟಿ, 2025–26ರಲ್ಲಿ ₹1.16 ಲಕ್ಷ ಕೋಟಿ, ಮತ್ತು ಈಗ 2026–27ರ ಬಜೆಟ್ ಅಂದಾಜಿನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡಲು ಯೋಜನೆ ರೂಪಿಸಲಾಗಿದೆ. ಅಂದರೆ ಕೇವಲ ನಾಲ್ಕು ವರ್ಷಗಳಲ್ಲಿ ಈ ಸರ್ಕಾರವು ಸುಮಾರು ₹4.4 ಲಕ್ಷ ಕೋಟಿ ಹೊಸ ಸಾಲ ಮಾಡುವ ಪರಿಸ್ಥಿತಿ ಉಂಟುಮಾಡಿದೆ. ಇದು ಅಭಿವೃದ್ಧಿಗಾಗಿ ಮಾಡಿದ ಸಾಲವೇ? ಅಥವಾ ಚುನಾವಣಾ ಗ್ಯಾರಂಟಿಗಳಿಗಾಗಿ ರಾಜ್ಯದ ಭವಿಷ್ಯವನ್ನು ಗಿರವಿ ಇಟ್ಟ ಸಾಲವೇ ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ಕನ್ನಡಿಗನ ಮನಸ್ಸಿನಲ್ಲಿ ಮೂಡಿದೆ’ ಎಂದು ಕುಟುಕಿದ್ದಾರೆ.

Source : Prajavani

29 days ago

Home Flash News