... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ;

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ; ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಘೋಷಣೆ

ದಾವಣಗೆರೆ: ಉಪ ಚುನಾವಣೆ ಹೊಸ್ತಿಲಲ್ಲಿರುವ ದಾವಣಗೆರೆ ದಕ್ಷಿಣಕ್ಕೆ ₹100 ಕೋಟಿ ಅನುದಾನ, ಚನ್ನಗಿರಿ ತಾಲೂಕಿನ 41 ಕೆರೆ ತುಂಬಿಸುವ ಯೋಜನೆ, ನೇರ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಮತ್ತು ನಿರ್ಮಾಣಕ್ಕೆ ಅನುದಾನ ಸೇರಿದಂತೆ ಕೆಲವೊಂದಿಷ್ಟು ಯೋಜನೆ, ಕಾರ್ಯಕ್ರಮ ಘೋಷಿಸುವ ಮೂಲಕ ಹಸಿದವರ ಬಾಯಿಗೆ ಒಂದಿಷ್ಟು ನೀರುಣಿಸುವ ಪ್ರಯತ್ನವನ್ನು ರಾಜ್ಯ ಬಜೆಟ್‌ ಮೂಲಕ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿ, ಕೈ ತೊಳೆದುಕೊಂಡಿದ್ದಾರೆ. ತಮ್ಮ 17ನೇ ದಾಖಲೆಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ತಮಗೆ ರಾಜಕೀಯ ಪುನರ್ಜನ್ಮ ನೀಡಿದ್ದ, ಸಿದ್ಧರಾಮೋತ್ಸವ ಮೂಲಕ ಮತ್ತಷ್ಟು ಶಕ್ತಿ ತುಂಬಿದ್ದಂತಹ ದಾವಣಗೆರೆ ಜಿಲ್ಲೆಗೆ ವಿಶೇಷವಾಗಿ ಏನಾದರೂ ಕೊಡುತ್ತಾರೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ ಮತ್ತೊಮ್ಮೆ ಕಟ್ಟಿಬುತ್ತಿ ಎಂಬುದು ಸಾಬೀತಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸೋಲಿಲ್ಲದ್ದ ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪ ಇದ್ದಾಗಲಾದರೂ ₹100 ಕೋಟಿ ಅನುದಾನ ನೀಡಿದ್ದರೆ ಸಿಎಂ ಸಿದ್ದರಾಮಯ್ಯ ಕಳಕಳಿಗೆ ಜನರು ಮೆಚ್ಚುತ್ತಿದ್ದರು. ದಾವಣಗೆರೆ ಹಳೇ ಊರು- ಹೊಸ ಊರು ಎಂಬುದಾಗಿ ಅಭಿವೃದ್ಧಿ ವಿಚಾರದಲ್ಲಿ ಉತ್ತರ-ದಕ್ಷಿಣ ಕ್ಷೇತ್ರಗಳಾಗಿವೆ. ಅಂತಹ ಪರಿಸ್ಥಿತಿಯಲ್ಲಿ ಶಾಮನೂರು ಶಿವಶಂಕರಪ್ಪನವರು ಇದ್ದಾಗಲೇ ₹100 ಕೋಟಿ ಅನುದಾನ ಬಿಡುಗಡೆ ಮಾಡಿ, ಪರಿಶಿಷ್ಟರು, ಅಲ್ಪ ಸಂಖ್ಯಾತರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಿದ್ದರೆ ಸ್ವತಃ ಶಾಮನೂರು ಅವರೇ ಸಿಎಂಗೆ ತಮ್ಮ ಕ್ಷೇತ್ರಕ್ಕೆ ಆಹ್ವಾನಿಸಿ, ಅದ್ಧೂರಿ ಕಾರ್ಯಕ್ರಮ ಮಾಡುತ್ತಿದ್ದರು. ಈಗ ಯಜಮಾನ ಇಲ್ಲದ ಮನೆಯಂತಹ ಪರಿಸ್ಥಿತಿಯಲ್ಲಿ ದಕ್ಷಿಣ ಕ್ಷೇತ್ರವಿದೆ. ಉಪ ಚುನಾವಣೆ ಎದುರು ನೋಡುತ್ತಿದೆ. ಉಪ ಸಮರ ಗಮನದಲ್ಲಿಟ್ಟುಕೊಂಡೇ, ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಉಳಿಸಿಕೊಳ್ಳಲು ₹100 ಕೋಟಿ ಅನುದಾನದ ದಾಳವನ್ನು ಸಿದ್ದರಾಮಯ್ಯ ಉರುಳಿಸಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ.

 ಉಪ ಚುನಾವಣೆ ಹೊಸ್ತಿಲಲ್ಲಿ ನಿಂತ ದಾವಣಗೆರೆ ದಕ್ಷಿಣ ಕ್ಷೇತ್ರವನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂಬ ಕಾರಣಕ್ಕೆ ಪರಿಶಿಷ್ಟರು, ಅಲ್ಪ ಸಂಖ್ಯಾತರು ಹೆಚ್ಚಾಗಿ ವಾಸಿಸುವ ವಿವಿಧ ಭಾಗಗಳಿಗೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ₹100 ಕೋಟಿ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಇಷ್ಟು ಸಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ದಕ್ಷಿಣ ಕ್ಷೇತ್ರದ ಅದೇ ಪರಿಶಿಷ್ಟ ಜಾತಿ- ಪಂಗಡಗಳು, ಅಲ್ಪಸಂಖ್ಯಾತರು ನೆನಪಾಗದೇ, ಉಪ ಚುನಾವಣೆ ಘೋಷಣೆಯಾಗುವ ಮುನ್ನಾ ದಿನಗಳಲ್ಲಿ ನೆನಪಾಗಿರುವಂತಿದೆ ಎಂಬ ಮಾತು ಸ್ವತಃ ಜನರಿಂದ ಕೇಳಿಬರುತ್ತಿವೆ. ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಮೀನು ಮಾರಾಟ ಕೇಂದ್ರ ಸ್ಥಾಪಿಸುವುದಾಗಿ, ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ನಿಲಯ ನಿರ್ಮಾಣ, ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗಗಳಿಗೆ ಭೂ ಸ್ವಾಧೀನ ಹಾಗೂ ನಿರ್ಮಾಣಕ್ಕೆ ಅನುದಾನವನ್ನೂ ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ ಬಜೆಟ್‌ನಲ್ಲಿ ಮೀಸಲಿಟ್ಚಿದ್ದಾರೆ. ದಾವಣಗೆರೆ ತಾ. ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸುವ, ಆನಗೋಡು ಗ್ರಾಮದಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪಿಸುವ ಘೋಷಣೆ ಸಹ ಮಾಡಿದ್ದಾರೆ.

Source : Asianet News

2 hours ago

Home Flash News